ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್‌ನ ರಾಷ್ಟ್ರೀಯ ಮಟ್ಟದ ತೀರ್ಪುಗಾರಿಕಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಪತ್ರಕರ್ತ ಹಂಝಾ ಕಿನ್ಯಾ ಅವರು ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ತಮ್ಮ ಆಸಕ್ತಿ ಮತ್ತು ಪರಿಶ್ರಮದ ಮೂಲಕ ಸಾಧನೆ ಮಾಡಿರುವ ಹಂಝಾ ಕಿನ್ಯಾ ಅವರ ಈ ಆಯ್ಕೆಯು ಹೆಮ್ಮೆಯ ಸಂಗತಿಯಾಗಿದೆ. ಕ್ರೀಡಾ ಕ್ಷೇತ್ರವಲ್ಲದೇ ಸಾಂಸ್ಕೃತಿಕ ಹಾಗೂ ಸಂಘಟನಾ ರಂಗದಲ್ಲೂ ಹಂಝಾ ಕಿನ್ಯಾ ಸಕ್ರಿಯರಾಗಿದ್ದಾರೆ. 12 ವರ್ಷಗಳ ಕಾಲ ರಾಜ್ಯ ಮಟ್ಟದ ಸೇವೆ ಸಲ್ಲಿಸಿ, ಉಳ್ಳಾಲ ತಾಲ್ಲೂಕು ಅಮೆಚೂರು ಕಬಡ್ಡಿ ತೀರ್ಪುಗಾರರ ಮಂಡಳಿ, ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ತೀರ್ಪುಗಾರರ ಮಂಡಳಿಯ ಸದಸ್ಯರಾಗಿರುವ ಇವರು ಇದೀಗ ರಾಷ್ಟ್ರೀಯ ಮಟ್ಟದ ತೀರ್ಪುಗಾರರಾಗಿ ಆಯ್ಕೆಯಾಗಿರುತ್ತಾರೆ.
ರಾಷ್ಟ್ರೀಯ ಮಟ್ಟದ ತೀರ್ಪುಗಾರರಾಗಿ ಆಯ್ಕೆಯಾಗಿರುವ ಅವರಿಗೆ ಕ್ರೀಡಾಭಿಮಾನಿಗಳು, ಪತ್ರಕರ್ತರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಕಬಡ್ಡಿ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.