ಮಂಗಳೂರು: ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದ 16ನೇ ಘಟಿಕೋತ್ಸವದಲ್ಲಿ ಜೈವಿಕ ವೈದ್ಯಕೀಯ ವಿಜ್ಞಾನ (ಬಯೋ ಮೆಡಿಕಲ್ ಸೈನ್ಸ್) ವಿಭಾಗದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಗೈದ ಆರ್. ತನ್ವಿ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಘಟಿಕೋತ್ಸವದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿಶಾಲ್ ಹೆಗ್ಡೆ, ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ವಿವೇಕ್ ಲಾಲ್, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ಎಸ್. ಮೂಡಿತ್ತಾಯ, ಪ್ರೊ. ಚಾನ್ಸಲರ್ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಆರ್. ತನ್ವಿ ಅವರು ಹಿರಿಯ ಪತ್ರಕರ್ತ ರಾಮಕೃಷ್ಣ ಆರ್. ಹಾಗೂ ಡಾ. ರೇಶ್ಮಾ ಜಿ. ಉಳ್ಳಾಲ್ ದಂಪತಿಯ ಪುತ್ರಿಯಾಗಿದ್ದಾರೆ. ಅವರ ಈ ಸಾಧನೆಗೆ ಕುಟುಂಬಸ್ಥರು, ಬಂಧುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

