ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ (ರಿ.) ಹಾಗೂ ಯೋಗೀಶ್ ಶೆಟ್ಟಿ ಜಪ್ಪು ಅವರ ತುಳುನಾಡ ಸೂರ್ಯ ಪತ್ರಿಕೆಯ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನವೆಂಬರ್ 17ರಂದು ಮಂಗಳೂರಿನ ಉರ್ವ ಸ್ಟೋರ್ನ ತುಳು ಭವನದಲ್ಲಿ ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


ಮಧ್ಯಾಹ್ನ 2 ಗಂಟೆಯಿಂದ ಭಾಷಣ ಸ್ಪರ್ಧೆ ಹಾಗೂ ವಿವಿಧ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ತೌಳವ ಸಹಕಾರಿ ಮಾಣಿಕ್ಯ, ತೌಳವ ಸಹಕಾರಿ ರತ್ನ, ತೌಳವ ಸಹಕಾರಿ ಸಿರಿ ಹಾಗೂ ತೌಳವ ಸಹಕಾರಿ ಸಾಧಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಅಲ್ಲದೆ, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 3 ಗಂಟೆಯಿಂದ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ವತಿಯಿಂದ ನೃತ್ಯ ವೈಭವ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಮೂಡಬಿದಿರೆ ಜೈನ ಮಠದ ಶ್ರೀ ಶ್ರೀ ಶ್ರೀ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಮಾಡೂರು ಶಿವದುರ್ಗಾಂಬ ಮಠದ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಲ್. ಧರ್ಮ ಅವರು ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ತೌಳವ ಸಹಕಾರಿ ಸಿರಿ ಪ್ರಶಸ್ತಿ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ತೌಳವ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ತೌಳವ ಸಹಕಾರಿ ಸಾಧಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಜೋಯೆಲ್ ನೊರೊನ್ಹಾ ವಹಿಸಲಿದ್ದಾರೆ.
ಭಾಷಣ ಸ್ಪರ್ಧೆಯ ಬಹುಮಾನಗಳನ್ನು ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ (ದುಬೈ), ಸಹಕಾರ ಸಂಘಗಳ ಜಂಟಿ ನಿಬಂಧಕ ಪಿ. ಶಶಿಧರ್, ಉಪ ನಿಬಂಧಕ ಎಚ್.ಎನ್. ರಮೇಶ್, ಲಾವಣ್ಯ ಕೆ.ಆರ್., ತ್ರಿವೇಣಿ ರಾವ್ ಕೆ., ರಘು ಎಸ್.ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ವಕೀಲ ಚಂದ್ರಹಾಸ್ ಕದ್ರಿ ವಿತರಿಸಲಿದ್ದಾರೆ.
2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರಾದ ಮಾಜಿ ಸಚಿವ ಕೃಷ್ಣ ಪಾಲೆಮಾರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಭಗವತಿ ಸಹಕಾರ ಬ್ಯಾಂಕ್ನ ಉಪಾಧ್ಯಕ್ಷ ದೇವದಾಸ್ ಕೊಲ್ಯ, ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ರಾಜೇಶ್ ಹೆಗ್ಡೆ, ಎಂ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ ಅನಿಲ್ ಲೋಬೋ, ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್, ಕೋಟೆಕಾರು ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಹಾಗೂ ರೈತರ ಸಹಕಾರ ಸಂಘ (ಅ.), ಹಿರಿಯಡ್ಕ ಇದರ ಅಧ್ಯಕ್ಷ ಬಿ. ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ಸೇರಿದಂತೆ ಹಲವು ಗಣ್ಯರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಅದಾನಿ ಗ್ರೂಪ್ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಮೊಯ್ದಿನ್ ಬಾವಾ ಮತ್ತು ಡಾ. ಬಿ.ಎಂ. ಫಾರೂಕ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಅಶ್ವಿನ್ ಜೋಯೆಲ್ ನೊರೊನ್ಹಾ ಹಾಗೂ ಹೇಮಾವತಿ ಅವರಿಗೆ ತೌಳವ ಸಹಕಾರಿ ಸಾಧಕ/ಸಾಧಕಿ ಗೌರವ ನೀಡಿ ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ (ವೈದ್ಯರ ಘಟಕ) ಡಾ. ರವೀಂದ್ರ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ವೈದ್ಯರ ಘಟಕದ ಅಧ್ಯಕ್ಷ ಡಾ. ಸಂದೀಪ್ ಸನಿಲ್, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶರತ್ ಅರೂರ್, ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ಹಾಗೂ ಆಲ್ ಇಂಡಿಯಾ ತುಳುವೆರ್ ಕಲ್ಚರಲ್ ಕ್ಲಬ್ (ರಿ.)ನ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಗೌರವ ಉಪಸ್ಥಿತರಿರಲಿದ್ದಾರೆ.


