ಪಂಪುವೆಲ್:ಮಕ್ಕಳ ದಿನಾಚರಣೆಯ ಅಂಗವಾಗಿ ಲಿಟಲ್ ಏಂಜಲ್ಸ್ ಮಕ್ಕಳ ಕ್ಲಿನಿಕ್ ವತಿಯಿಂದ ಪುಟಾಣಿ ಮಕ್ಕಳಿಗಾಗಿ ವಿಶೇಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ನವೆಂಬರ್ 13ರ ಶುಕ್ರವಾರ ಸಂಜೆ 5ರಿಂದ 7 ಗಂಟೆಯವರೆಗೆ ಸ್ಪರ್ಧೆ ನಡೆಯಲಿದ್ದು, ಮಕ್ಕಳಲ್ಲಿರುವ ಸೃಜನಶೀಲತೆ ಹಾಗೂ ಕಲಾತ್ಮಕ ಪ್ರತಿಭೆಯನ್ನು ಅನಾವರಣಗೊಳಿಸಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುವುದು.
ಬಣ್ಣಗಳ ಲೋಕದಲ್ಲಿ ಮಕ್ಕಳ ಕಲ್ಪನೆಗಳಿಗೆ ರೆಕ್ಕೆ ನೀಡುವ ಉದ್ದೇಶದಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಗೂ ಪೋಷಕರು ಭಾಗವಹಿಸುವಂತೆ ಲಿಟಲ್ ಏಂಜಲ್ಸ್ ಮಕ್ಕಳ ಕ್ಲಿನಿಕ್ನ ಡಾ. ಸ್ವಾತಿ ರಾವ್ ಅವರು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.