Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಹಕ್ಕೊತ್ತಾಯ ಸಭೆ-ಅನುದಾನ ಬಿಡುಗಡೆಗೆ ದಾಖಲೆ ಸಹಿತ ಉತ್ತರ ನೀಡಲಿ: ಬಿಜೆಪಿ ಮುಖಂಡರ ಆಗ್ರಹ

UllalaVaniBy UllalaVaniNovember 17, 2026Updated:November 17, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಯು.ಟಿ. ಖಾದರ್ ಆರೋಗ್ಯ ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ: ವಿಕಾಸ್ ಪುತ್ತೂರು

ಉಳ್ಳಾಲ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿಯ ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಣಾಜೆ ಶಕ್ತಿ ಕೇಂದ್ರದ ವತಿಯಿಂದ ‘ನಮ್ಮ ಹಕ್ಕು ನಮಗೆ ನೀಡಿ’ ಜನಾಂದೋಲನದ ಅಂಗವಾಗಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದಿಂದ ಕೊಣಾಜೆ ಗ್ರಾಮ ಪಂಚಾಯತ್ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಪಂಚಾಯತ್‌ಗೆ ಮನವಿ ಸಲ್ಲಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್. ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಬಡಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಕಳೆದ 30 ವರ್ಷಗಳಿಂದ ತಂದೆ-ಮಗನ ಆಡಳಿತವಿದ್ದರೂ, ಉಳ್ಳಾಲ ತಾಲೂಕು ರಚನೆಯಾಗಿ ಐದು ವರ್ಷ ಕಳೆದರೂ ತಾಲೂಕು ಕಚೇರಿ ಆರಂಭಿಸಲು ಸಾಧ್ಯವಾಗಿಲ್ಲ. ಇಂತಹ ಆಡಳಿತ ನಡೆಸುವವರು ಶಾಸಕರಾಗಿ ಮುಂದುವರಿಯಲು ಅರ್ಹರೇ ಎಂದು ಪ್ರಶ್ನಿಸಿದರು.

ಸರ್ಕಾರದ ಖಜಾನೆ ಖಾಲಿಯಾಗಿದ್ದು, ಕೋಟಿ ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ನೀಡುವ ಹೇಳಿಕೆಗಳು ಕೇವಲ ಪ್ರಚಾರಕ್ಕೆ ಸೀಮಿತವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಅನುದಾನದ ಬಗ್ಗೆ ಮಾಧ್ಯಮಗಳ ಮುಂದೆ ದಾಖಲೆ ಸಹಿತ ಮಾಹಿತಿ ನೀಡಲಿ. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಫಜೀರು ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪ್ಲಾಸ್ಟಿಕ್ ಹೊದಿಕೆಯಲ್ಲಿರುವುದೇ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಬಿಂಬಿಸಿ ಪ್ಲೆಕ್ಸ್ ಅಳವಡಿಸುವ ಮೂಲಕ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಬಿಜೆಪಿ ಕ್ಷೇತ್ರಗಳಿಗೆ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ. ನೇಮ, ಕೋಲ ಹಾಗೂ ಜಾತ್ರೆಗಳಿಗೆ ತೆರಳಿ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುವ ರಾಜಕಾರಣ ಸರಿಯಲ್ಲ ಎಂದು ಹೇಳಿದರು.

‘ನಮ್ಮ ಹಕ್ಕು, ನಮ್ಮ ಹೆಜ್ಜೆ’ ಜಿಲ್ಲಾ ಸಹಸಂಚಾಲಕ ವಿಕಾಸ್ ಪುತ್ತೂರು ಮಾತನಾಡಿ, ಕಳೆದ ಆರು ವರ್ಷಗಳಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆದಿಲ್ಲ. ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಮುಗಿದು ಹತ್ತು ತಿಂಗಳು ಕಳೆದರೂ ಚುನಾವಣೆ ನಡೆಸಿಲ್ಲ. ಚುನಾವಣೆ ನಡೆಸಿದರೆ ಜನರು ಸರ್ಕಾರವನ್ನು ಪ್ರಶ್ನಿಸುತ್ತಾರೆ ಎಂಬ ಭಯ ಮುಖ್ಯಮಂತ್ರಿಗೆ ಇದೆ ಎಂದು ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಲಿ. ನಿಮಗೆ ತಾಕತ್ತು, ದಮ್ಮು ಇದ್ದರೆ ಅನುದಾನದ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.

ಮಂಗಳೂರಿಗೆ ಪ್ರವಾಸಕ್ಕೆ ಬಂದವರಂತೆ ಬಂದು ಬೀಚ್ ತೋರಿಸಿ, ಅಂಜಲ್ ಮೀನು ತಿಂದು ಮಂಗಳೂರಿಗೆ 32 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದರೆ ಸಾಲದು. 32 ರೂಪಾಯಿ ನೀಡಲೂ ಸರ್ಕಾರದ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿಕೊಡಲಾಗಿತ್ತು. ಆಗ ಮನೆ ನಿರ್ಮಾಣಕ್ಕೆ ಬಳಸುವ ಕಲ್ಲಿನ ಬೆಲೆ ಕೇವಲ 16 ರೂ. ಇತ್ತು. ಈಗ 50 ರೂ. ಕೊಟ್ಟರೂ ಕಲ್ಲು ಸಿಗದ ಪರಿಸ್ಥಿತಿ ಇದೆ. ಕಳೆದ ಮೂರು ವರ್ಷಗಳಲ್ಲಿ ಶೇ.35ರಷ್ಟು ಬಿಪಿಎಲ್ ಕಾರ್ಡ್‌ಗಳನ್ನು ಕಡಿತಗೊಳಿಸಲಾಗಿದೆ. ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯತ್‌ಗಳಲ್ಲಿ ಏಕ ನಿವೇಶನ ಮತ್ತು 9/11 ವಿಚಾರವಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನೂ ಪ್ರಸ್ತಾಪಿಸಿದರು. ಗ್ರಾಮೀಣ ನಿವಾಸಿಗಳನ್ನು ಅವಹೇಳನ ಮಾಡುವ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು. ಯು.ಟಿ. ಖಾದರ್ ಆರೋಗ್ಯ ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಹೆಚ್ಚು ಕಾಲ ಉಳಿಯುವುದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಕಾರ್ಯದರ್ಶಿ ಮೋಹನ್ ರಾಜ್, ದಯಾನಂದ ತೊಕ್ಕೊಟ್ಟು, ಮಂಡಲ ಉಪಾಧ್ಯಕ್ಷ ಯಶವಂತ್ ದೇರಾಜೆ, ಕೊಣಾಜೆ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಗೀತಾ ಕುಂದರ್, ಮಂಡಲ ಕಾರ್ಯದರ್ಶಿಗಳಾದ ರಮೇಶ್ ಬೆದ್ರೂಳಿಕೆ, ಭರತ್ ಗಟ್ಟಿ, ಕಿಶೋರ್ ಕುತ್ತಾರು, ಮಂಡಲ ಉಪಾಧ್ಯಕ್ಷೆ ಸುಮನ ಹರೀಶ್ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಮುರಳೀಧರ ಕೊಣಾಜೆ, ಸುಮಲತಾ ಕೊಣಾಜೆ, ಧನಲಕ್ಷ್ಮೀ ಗಟ್ಟಿ, ಸೋಮೇಶ್ವರ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಜಿಲ್ಲಾ ಮಾಧ್ಯಮ ಸಂಚಾಲಕ ಹೇಮಂತ್ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರಿಶ್ಚಂದ್ರ ಶೆಟ್ಟಿಗಾರ್, ರೈತಮೋರ್ಚಾ ಅಧ್ಯಕ್ಷ ಪದ್ಮನಾಭ ಗಟ್ಟಿ, ಶಕ್ತಿ ಕೇಂದ್ರ ಪ್ರಮುಖರಾದ ಸನತ್ ರೆ ಕಕ್ಕೆಮಜಲು, ತಿಮ್ಮಪ್ಪ ನಾಯಕ್, ಶಿಪ್ರಸಾದ್ ಕೊಣಾಜೆ, ಸತೀಶ್ ಮುನ್ನೂರು, ಶಿವಪ್ರಸಾದ್ ಕಡಬ, ಚಂದ್ರ ಗಟ್ಟಿ, ನಿತ್ಯಾನಂದ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಾಯಿ ಪರಿವಾರ ಟ್ರಸ್ಟ್ ಸಮಾಜಮುಖಿ ಸೇವಾ ಕಾರ್ಯಗಳ ‌ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದೆ : ಚಂದ್ರಹಾಸ್‌ ಪಂಡಿತ್‌ ಹೌಸ್

November 17, 2026

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಸೋಮೇಶ್ವರದಲ್ಲಿ ಜಿಲ್ಲಾ ಮಟ್ಟದ ಯೋಗ ಶಿಕ್ಷಣ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ

November 13, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
All News

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಹಕ್ಕೊತ್ತಾಯ ಸಭೆ-ಅನುದಾನ ಬಿಡುಗಡೆಗೆ ದಾಖಲೆ ಸಹಿತ ಉತ್ತರ ನೀಡಲಿ: ಬಿಜೆಪಿ ಮುಖಂಡರ ಆಗ್ರಹ

By UllalaVaniNovember 17, 20260

ಯು.ಟಿ. ಖಾದರ್ ಆರೋಗ್ಯ ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ: ವಿಕಾಸ್ ಪುತ್ತೂರು ಉಳ್ಳಾಲ: ರಾಜ್ಯ…

ಸಾಯಿ ಪರಿವಾರ ಟ್ರಸ್ಟ್ ಸಮಾಜಮುಖಿ ಸೇವಾ ಕಾರ್ಯಗಳ ‌ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದೆ : ಚಂದ್ರಹಾಸ್‌ ಪಂಡಿತ್‌ ಹೌಸ್

November 17, 2026

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ತುಳುನಾಡಿನ ಜಾನಪದ ಕ್ಷೇತ್ರದ ಸಂಶೋಧನೆಗೆ ಬಿ.ಎ. ಲೋಕಯ್ಯ ಶಿಶಿಲ ಅವರಿಗೆ ಗೌರವ ಡಾಕ್ಟರೇಟ್

November 14, 2026
1 2 3 … 2,169 Next
Automatic YouTube Gallery

ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026

ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
Now Playing
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026 📍 ...

ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
Now Playing
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸೆರೆಹಿಡಿದು ಕಾಡಿಗೆ ...
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸೆರೆಹಿಡಿದು ಕಾಡಿಗೆ ಬಿಟ್ಟ ದಿಟ್ಟ ಯುವಕ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version