Site icon Ullalavani

ಸಂತ ಅಲೋಶಿಯಸ್ ಉರ್ವದಲ್ಲಿ ಪೋಷಕರಿಗಾಗಿ ವಿವಿಧ ಸ್ಪರ್ಧೆಗಳಿಗೆ ಚಾಲನೆ

ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವದಲ್ಲಿ ಪೋಷಕರಿಗಾಗಿ ಬೆಂಕಿ ರಹಿತ ಅಡುಗೆ, ಪುಷ್ಪಗುಚ್ಛ ರಚನೆ ಹಾಗೂ ಛದ್ಮವೇಷ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಅಲೋಶಿಯಸ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ಪರ್ಧೆಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶೈಲಶ್ರೀ ಉಪಸ್ಥಿತರಿದ್ದರು.

ಶಿಕ್ಷಕರಾದ ಸುಧಾಕರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version