Site icon Ullalavani

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ

ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು.

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ ಪಿಂಟೊ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಅಲೋಶಿಯಸ್ ಡಿಸೋಜ ಹಾಗೂ ಮುಖ್ಯ ಅತಿಥಿ ಮ್ಯಾಕ್ಸಿಮ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶೈಕ್ಷಣಿಕ ಹಾಗೂ ಇತರ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪೋಷಕರು ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಮಕ್ಕಳಾದ ಪ್ರಣವ್, ಪ್ರೇಕ್ಷಾ, ಮೇದ್ಯಾ ಹಾಗೂ ದೃತಿ ಕಾರ್ಯಕ್ರಮ ನಿರೂಪಿಸಿದರು. ಫಾತಿಮಾ ರಿಜಾ ಸ್ವಾಗತಿಸಿ, ತನೀಷ್ ರಾವ್ ವಂದಿಸಿದರು.

Exit mobile version