ಉರ್ವ: ಸಂತ ಅಲೋಶಿಯಸ್ ಶಾಲೆ, ಉರ್ವದಲ್ಲಿ ಪೋಷಕರಿಗಾಗಿ ಕ್ರೀಡಾ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಆನಂದವೇಲು ಟಿ.ಎಂ. ಅವರು ಉದ್ಘಾಟಿಸಿ, ಕ್ರೀಡೆಗಳು ಪೋಷಕರಲ್ಲಿ ಪರಸ್ಪರ ಬಾಂಧವ್ಯ, ಸಹಕಾರ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹಿತನುಡಿಗಳನ್ನಾಡಿದರು.
ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬ್ಬಂದಿಯ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಷಕರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಪೋಷಕರು ಉತ್ಸಾಹದಿಂದ ಪಾಲ್ಗೊಂಡಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ ಪಿಂಟೊ ಹಾಗೂ ಮುಖ್ಯಶಿಕ್ಷಕ ಅಲೋಶಿಯಸ್ ಡಿಸೋಜ ಉಪಸ್ಥಿತರಿದ್ದರು. ಶ್ರೀ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಪ್ರಮೋದ್ ಸ್ವಾಗತಿಸಿದರು. ಶ್ರೀಮತಿ ಹರಿಣಾಕ್ಷಿ ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಶೈಲಶ್ರೀ ವಂದಿಸಿದರು.