ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ ವಿನಯ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ನೀಡಿದ ಆದೇಶದಲ್ಲೆನಿದೆ?
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ಬಳಿಕ ನ್ಯಾಯಾಲಯವು ಆದೇಶ ನೀಡಿದ್ದು, ಜಾಮೀನು ರದ್ದು ಮಾಡಿದೆ. 2 ವಾರದಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.
2026ರ ಏಪ್ರಿಲ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು, ಇದೇ ವರ್ಷದ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅಕ್ಟೋಬರ್ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯದ ಅಂತಿಮ ಆದೇಶ ಹೊರಬಿದ್ದಿದ್ದು,