ಮಹಾನಗರ: ಚೈನ್ ಕ್ಯಾಂಪೇನ್ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ದಕ್ಷಿಣ ಕನ್ನಡ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಸಹಯೋಗದಲ್ಲಿ ನಗರದ ಸಂತ ಥೆರೆಸಾ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕೃಷಿ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಲಾಯಿತು.


ಪ್ರವಾಸದ ವೇಳೆ ವಿದ್ಯಾರ್ಥಿಗಳು ಮೀನುಗಾರಿಕೆ ಹಾಗೂ ಅದರ ತಾಂತ್ರಿಕ ವಿಧಾನಗಳು, ಮಣ್ಣಿನ ಆರೋಗ್ಯ ಮತ್ತು ಸಂರಕ್ಷಣೆ, ಹೈನುಗಾರಿಕೆ, ಪಶುಸಂಗೋಪನೆ, ಸಾವಯವ ಕೃಷಿ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಪ್ರಾಯೋಗಿಕ ಜ್ಞಾನ ಪಡೆದುಕೊಂಡರು.


ಈ ಸಂದರ್ಭದಲ್ಲಿ ಫುಡ್ ಚೈನ್ ಕ್ಯಾಂಪೇನ್ನ ಸಂಸ್ಥಾಪಕ ಯತೀಶ್ ತುಕಾರಾಂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಆಹಾರ ಭದ್ರತೆಯ ಮಹತ್ವವನ್ನು ಯುವಜನರು ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಕೃಷಿ ಸಮುದಾಯದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕೃಷಿ ಕ್ಷೇತ್ರದ ವಿವಿಧ ಆಯಾಮಗಳನ್ನು ನೇರವಾಗಿ ಪರಿಚಯಿ ಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸಲು ಈ ಪ್ರವಾಸ ಸಹಕಾರಿಯಾಯಿತು.



