ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಚಿಕ್ಕಬಳ್ಳಾಪುರ: ದೇಶದ ಸಂಸ್ಕøತಿಯ ಬಗ್ಗೆ ಬಿಜೆಪಿ ಪಕ್ಷದ ನಾಯಕರಿಗೆ ಗೊತ್ತಿಲ್ಲ. ಬಿಜೆಪಿ ಮುಖಂಡರು ದೇಶಭಕ್ತಿಯ ಹೆಸರಿನಲ್ಲಿ ದೇಶ ಮತ್ತು ರಾಜ್ಯವನ್ನು ಒಡೆಯುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬುಧವಾರ ಮಾತನಾಡಿದ ಅವರು ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋಮಾಂಸ ಸೇವನೆಯ ಹೇಳಿಕೆಯನ್ನು ಮುಂಬಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಗೃಹಸಚಿವ ರಿಜಿಜು ಗೋಮಾಂಸವನ್ನು ಸೇವಿಸುವುದರ ಬಗ್ಗೆ ಮಾತನಾಡಿದ ಅವರು ಬಿಜೆಪಿ ನಾಯಕರಿಗೆ ಧೈರ್ಯವಿದ್ದರೆ ಸಚಿವ ರಿಜೆಜು ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬಿಜೆಪಿ ಪಕ್ಷದವರು ಸಿಎಂ ಹೇಳಿಕೆಯನ್ನು ದೊಡ್ಡ ವಿವಾದವನ್ನಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


