ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಜುಬಾ: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ವಿಮಾನವೊಂದು ಪತನಗೊಂಡಿದ್ದು, 40 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಸುಡಾನ್ ಜಬಾದಲ್ಲಿ ಬುಧವಾರ ನಡೆದಿದೆ.
ವಿಮಾನ ಪತನಗೊಂಡ ಸ್ಥಳದಲ್ಲಿ 40ಶವಗಳು ಪತ್ತೆಯಾಗಿದ್ದು, ಇನ್ನು ವಿಮಾನದಲ್ಲಿ ಎಷ್ಟು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಕಾರ್ಗೊ ವಿಮಾನ ರನ್ ವೇ ಯಿಂದ ಹಾರಿದ ಬಳಿಕ 800 ಮೀಟರ್ ದೂರದಲ್ಲೇ ಪತನಗೊಂಡಿದೆ ಎಂದು ವರದಿಯಾಗಿದ್ದು, ವಿಮಾನ ಪತನಕ್ಕೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.


