ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ತೊಕ್ಕೊಟ್ಟಿನ ಭಗತ್ ಸೇವಾ ಸಿಂಗ್ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ನಡೆದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ ಕಾರ್ಯಕ್ರಮ ಸೇರಿದ ಸಾವಿರಾರು ಕಲಾರಸಿಕರ ಮನ ತಣಿಸಿತು. ಆಧುನಿಕ ಹಾಗೂ ಸಾಂಪ್ರದಾಯಿಕ ವಿಭಾಗದಲ್ಲಿ ನೂರಕ್ಕೂ ಮಿಕ್ಕಿ ಗೂಡುದೀಪಗಳು ಸ್ಪರ್ಧಿಸಿದ್ದವು.











