ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಈ ಕುರಿತು ಸಂಸದರು ಮೈಸೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
`ಕುಟ್ಟಪ್ಪ ಅವರಂತೆಯೇ ನಿನಗೂ ಸಾವು ಬರುತ್ತದೆ ಎಂದು ಬೆದರಿಕೆ ಹಾಕಲಾಗಿದೆ’ ಎಂದು ಪ್ರತಾಪ್ ಸಿಂಹ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜೀವ ಬೆದರಿಕೆ ಕುರಿತು ವಿಜಯನಗರ ಪೊಲೀಸರಿಗೆ ಅವರು ದೂರು ನೀಡಿದ್ದಾರೆ ಹಾಗೂ ಮೈಸೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ.