ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮಂಗಳೂರು: ಬಂದ್ ಗಾಳಿಸುದ್ಧಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ನಾಳೆ ಯಾವುದೇ ಸಾರ್ವಜನಿಕ ಸಭೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಆದೇಶಿಸಿದ್ದಾರೆ.
ಸಭೆಗಳಿಗೆ ಈಗಾಗಲೇ ಕೊಟ್ಟಿರುವ ಅನುಮತಿಗಳನ್ನು ಹಿಂಪಡೆಯಲಾಗುವುದು. ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಬಾರ್ ಹಾಗೂ ವೈನ್ ಶಾಪ್ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಎಲ್ಲಾ ಸರಕಾರಿ ನೌಕರರು ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ತಾಲೂಕು ಕಚೇರಿಗಳಲ್ಲಿ ಕಾನೂನು ಕಾಪಾಡುವಂತೆ ಆಯಾಯ ತಹಶೀಲ್ದಾರರಿಗೆ ಆದೇಶಿಸಲಾಗಿದೆ.
ಸಭೆಯಲ್ಲಿ ಪೊಲೀಸ್ ಕಮೀಷನರ್ ಎಸ್.ಮುರುಗನ್, ಎಸ್.ಪಿ ಶರಣಪ್ಪ, ಎಡಿಸಿ ಕುಮಾರ್, ಡಿಸಿಪಿ ಶಾಂತರಾಜು, ಎಂ.ಸಿ.ಸಿ ಕಮೀಷನರ್ ಡಾ.ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.


