ಬೆಂಗಳೂರು: ಖ್ಯಾತ ಹಿರಿಯ ಸಾಹಿತಿ ಜ್ಷಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಗಿರೀಶ್ ಕಾರ್ನಾಡ್ ಅವರು ಕೆಂಪೇಗೌಡರು ಸ್ವಾತಂತ್ರ ಸೇನಾನಿ ಅಲ್ಲ, ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅವರ ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ತಮ್ಮ ಹೇಳಿಕೆಗೆ ಕಾರ್ನಾಡ್ ಕ್ಷಮೆಯಾಚಿಸಿದ್ದರು.