ಬೆಂಗಳೂರು: ಯುವತಿಯೊಬ್ಬಳ ಮೇಲೆ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಟೆನ್ನಿಸ್ ಸ್ಟೇಡಿಯಂ ಕಡೆ ನಡೆದು ಬರುತ್ತಿದ್ದ ಯುವತಿಯ ಮೇಲೆ ನಾಲ್ವರು ಕಾಮುಕರು ಸೇರಿ ಗ್ಯಾಂಗ್ರೇಪ್ ನಡೆಸಿದ್ದಾರೆ.
ತೋಟಗಾರಿಕೆ ಇಲಾಖೆಯ ಇಬ್ಬರು ಸಿಬ್ಬಂದಿ ಸೇರಿ ನಾಲ್ವರು ಅತ್ಯಾಚಾರ ಎಸಗಿರುವುದಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಯುವತಿ ನೀಡಿದ ದೂರಿನ ಆಧಾರದ ಮೇರೆಗೆ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಿಬ್ಬರು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.


