Site icon Ullalavani

ಬಬ್ಬುಕಟ್ಟೆ : ಯುವಕನಿಗೆ ಚೂರಿ ಇರಿತ

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಕೆಲಸ ಮುಗಿಸಿ ಮನೆಗೆ ಸ್ನೇಹಿತನ ಜತೆಗೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನಿಗೆ ಬೇರೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ.

ಚೂರಿ ಇರಿತಕ್ಕೊಳಗಾದಾತನನ್ನು ಪಾವೂರು ಇನೋಳಿ ನಿವಾಸಿ ಧೀರಜ್ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಡಿಜಿಟಲ್ ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮುಗಿಸಿ, ಸ್ನೇಹಿತ ಸೀತೇಶ್ ಎಂಬಾತನ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಪ್ಪು ಪಲ್ಸಾರ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.  ಇದರಿಂದ ಭುಜದ ಭಾಗಕ್ಕೆ ಗಾಯಗೊಂಡಿರುವ ಧೀರಜ್ ನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version