ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಆಂಧ್ರಪ್ರದೇಶ: ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರದ ಚಿತ್ತೂರು ಜಿಲ್ಲೆಯ ಮೆಟ್ಟಪುರ್ವಪಲ್ಲಿ ಗ್ರಾಮದ ಬಳಿ ನಡೆದಿದೆ.
ಬೈರೆಡ್ಡಿಪಲ್ಲಿಯಲ್ಲಿನ ವಿವಾಹ ಸಮಾರಂಭಕ್ಕೆಂದು ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.