ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಕೇಸ್ ಗಳಲ್ಲಿ ಸುಮಾರು ಎರಡು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಮತ್ತೆ ಬಂಧಿಸಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿರುವ ರೆಡ್ಡಿಗೆ ಎಸ್‌ಐಟಿ ಅಧಿಕಾರಿಗಳು ಮತ್ತೊಂದು ಶಾಕ್ ನೀಡಿದ್ದಾರೆ.
13 ಕೇಸ್ ಅಲ್ಲದೆ ಹೊಸತಾಗಿ ಇನ್ನೊಂದು ಪ್ರಕರಣ ದಾಖಲಿಸಿ ಎಸ್‌ಐಟಿ ಅಧಿಕಾರಿಗಳು ಪ್ರಕರಣದ ವಿಚಾರಣೆಗಾಗಿ ಇಂದು ವಶಕ್ಕೆ ಪಡೆದಿದ್ದಾರೆ.


