ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕಿನ್ನಿಗೋಳಿ: ಬ್ಯಾಂಕ್ ದರೋಡೆ ನಡೆಸಿ ಕೋಟ್ಯಾಂತರ ರೂಪಾಯಿ ನಗನಗದನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಕಿನ್ನಿಗೋಳಿಯ ಮುಖ್ಯ ರಸ್ತೆಯಲ್ಲಿರುವ ಎಸ್.ಕೆ.ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಳ್ಳರು ಬ್ಯಾಂಕ್ ಕಟ್ಟಡದ ಹಿಂಬದಿಯಲ್ಲಿ ಇನ್ನೊಂದು ಕಟ್ಟಡ ನಿರ್ಮಾಣವಾತ್ತಿದ್ದು ಅಲ್ಲಿಂದ ಏಣಿಯ ಮೂಲಕ ಹತ್ತಿದ ಕಳ್ಳರು ಶಟರ್ ಮುರಿದು ಒಳ ನುಗ್ಗಿ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ನಗನಗದನ್ನು ದೋಚಿದ್ದಾರೆ.
ಬ್ಯಾಂಕ್‌ನಲ್ಲಿ ಅಳವಡಿಸಲಾಗಿದ್ದ ಸೈರನ್ ಕತ್ತರಿಸಿ ,ಸಿಸಿಟಿವಿ ಕ್ಯಾಮರಾಗಳನ್ನೂ ದರೋಡೆಕೋರರು ಹೊತ್ತೂಯ್ದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು , ಶ್ವಾನ ದಳ ಆಗಮಿಸಿ ತನಿಖೆ ಆರಂಭಿಸಿದ್ದಾರೆ.


