Site icon Ullalavani

ಆಳ್ವಾಸ್‍ನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾ ಕೂಟ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಮೂಡಬಿದ್ರೆಯ ಆಳ್ವಾಸ್‍ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರ 100ಮೀ. ಓಟದಲ್ಲಿ ಪೆರ್ಮನ್ನೂರಿನ ಅನುದಾನಿತ ಹೋಲಿ ಏಂಜಲ್ಸ್ ಹಿ.ಪ್ರಾ.ಶಾಲೆಯ ಫಾತಿಮಾ ಫರ್ಹಾನ ಇವರು ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ತೊಕ್ಕೊಟ್ಟಿನ ದಿ. ಆಯೂಬ್ ಸುಲೈಮಾನ್ ಹಾಗೂ ಜಮೀಲಾ ಮಗಳಾಗಿರುತ್ತಾರೆ. ಇವರನ್ನು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಎಲೋಶಿಯಸ್ ತರಬೇತಿ ನೀಡಿರುತ್ತಾರೆ.

14ರ ವಯೋಮಿತಿಯ ಬಾಲಕರ ಎತ್ತರ ಜಿಗಿತದಲ್ಲಿ ಪೆರ್ಮನ್ನೂರಿನ ಅನುದಾನಿತ ಹೋಲಿ ಏಂಜಲ್ಸ್ ಹಿ.ಪ್ರಾ.ಶಾಲೆಯ ಅಝ್ಮಾನ್ ಇವರು ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ಕಟೀಲಿನ ದಿ| ಅಬ್ದುಲ್ಲಾ ಹಾಗೂ ಆಯಿಷಾ ಇವರ ಮಗನಾಗಿರುತ್ತಾರೆ. ಇವರನ್ನು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಎಲೋಶಿಯಸ್ ತರಬೇತಿ ನೀಡಿರುತ್ತಾರೆ.

Exit mobile version