ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಣಾಜೆ: ಕೊಣಾಜೆ ಸಮೀಪದ ಪಜೀರಿನಲ್ಲಿರುವ ಸಂತ ಮರ್ಸಿಯಮ್ಮನವರ ಇಗರ್ಜಿಗೆ ಸೋಮವಾರ ಮಧ್ಯರಾತ್ರಿ ವೇಳೆ ನುಗ್ಗಿರುವ ಕಳ್ಳರು ರೂ.77,000 ಬೆಲೆಬಾಳುವ ಸೊತ್ತುಗಳನ್ನು ಕಳವುಗೈದಿದ್ದಾರೆ.
ಕೆಲ ತಿಂಗಳುಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಚರ್ಚಿನ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಪೂಜಾ ಸಾಮಾಗ್ರಿ ಸೇರಿದಂತೆ ಒಟ್ಟು ರೂ 77,000 ಬೆಲೆಬಾಳುವ ಸೊತ್ತುಗಳಿಗೆ ಕನ್ನ ಹಾಕಿದ್ದಾರೆ.
ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.







