ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕುತ್ತಾರು: ಇಲ್ಲಿನ ಬಬ್ಬುಕಟ್ಟೆಯ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಬ್ಬುಕಟ್ಟೆಯಲ್ಲಿ ದೈಹಿಕ ಶಿಕ್ಷಕನಾಗಿರುವ ಚೆಂಬುಗುಡ್ಡೆ ನಿವಾಸಿ ಡಾಲ್ಫಿ ಸಿಕ್ವೆರಾ ಎಂಬಾತ ಈ ಕೃತ್ಯ ಎಸಗಿದ್ದು, ಸುಮಾರು ನಾಲ್ಕು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ.
ಬುಧವಾರದಂದು ವಿದ್ಯಾರ್ಥಿಯೋರ್ವ ತನ್ನ ಹೆತ್ತವರಲ್ಲಿ ವಿಷಯ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಉಳ್ಳಾಲ ಪೊಲೀಸರಿಗೆ ಹೆತ್ತವರು ನೀಡಿದ ದೂರಿನಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಾಗಿದೆ.