Site icon Ullalavani

ಆಳ್ವಾಸ್ ನುಡಿಸಿರಿಗೆ ಅದ್ಧೂರಿ ಚಾಲನೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪ್ರತಿ ವರ್ಷದಂತೆ ನಡೆಯುವ ಕನ್ನಡ ನಾಡು – ನುಡಿಯ ನಾಲ್ಕು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ–2015’ ಗುರುವಾರ ಅದ್ದೂರಿ ಚಾಲನೆ ದೊರಕಿತು.

ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್’ ವೇದಿಕೆಯಲ್ಲಿ ದೀಪ ಬೆಳಗಿಸಿ, ಭತ್ತದ ತೆನೆಗೆ ಹಾಲು ಹಾಕುವ ಮೂಲಕ ಸಾಹಿತಿ ಡಾ.ವೀಣಾ ಶಾಂತೇಶ್ವರ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದರು. ಸಾಹಿತಿ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Exit mobile version