ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ಎದೆ ನೋವಿಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದೇರಳಕಟ್ಟೆ ಜಲಾಲ್ಬಾಗ್ ನಿವಾಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಲ್ಮಾನ್ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಮನೆಯವರು ಆರೋಪಿಸಿದ್ದಾರೆ.
ದೇರಳಕಟ್ಟೆಯಲ್ಲಿ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಕೆಲಸ ಮಾಡುವ ಸಲ್ಮಾನ್ ಮಧ್ಯಾಹ್ನದವರೆಗೆ ಕೆಲಸ ಮಾಡಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದ್ದು, ಎದೆನೋವು ಕಾಣಿಸಿಕೊಂಡಿದ್ದರಿಂದ ತನ್ನ ಬೈಕ್ನಲ್ಲೇ ಸಂಬಂಧಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದರು.ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೂರು ತಿಂಗಳ ಹಿಂದೆ ಮದುವೆ :
ಸಲ್ಮಾನ್ ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು. ಪತ್ನಿ, ತಂದೆ, ತಾಯಿ ಸಹೋದರಿ ಮೂವರು ಸಹೋದರರನ್ನು ಅಗಲಿದ್ದಾರೆ.


