Site icon Ullalavani

ಮುಂಬೈ: ಅಗ್ನಿ ಅವಘಡ

ಮುಂಬೈ: ಮುಂಬೈನ ಕಂಡವಲಿ ಪ್ರದೇಶದ ಗೋದಾಮುವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಘಟನೆಯಲ್ಲಿ 25-30 ಗ್ಯಾಸ್ ಸಿಲಿಂಡರ್‍ಗಳು ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, 2ಭಾರಿ ಸ್ಫೋಟದಿಂದ ಮುಂಬೈ ಜನತೆಯೇ ಬೆಚ್ಚಿಬಿದ್ದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Exit mobile version