ಮುಂಬೈ: ಮುಂಬೈನ ಕಂಡವಲಿ ಪ್ರದೇಶದ ಗೋದಾಮುವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ 25-30 ಗ್ಯಾಸ್ ಸಿಲಿಂಡರ್‍ಗಳು ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, 2ಭಾರಿ ಸ್ಫೋಟದಿಂದ ಮುಂಬೈ ಜನತೆಯೇ ಬೆಚ್ಚಿಬಿದ್ದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.


