(ರಾಮಗಢ)ಜಾರ್ಖಂಡ್: ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 13 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಮಗಢ ಜಿಲ್ಲೆಯ ಬುರ್ಕುಂಡಾ ರೇಲ್ವೆ ಕ್ರಾಸಿಂಗ್ ಬಳಿ ಸಂಭವಿಸಿದೆ.
ಹೌರಾ-ಭೂಪಾಲ್ ಎಕ್ಸ್‌ಪ್ರೆಸ್ ರೈಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಐವರು ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ.
ಪತ್ರತು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ ಎಸ್ಪಿ ಎಂ. ತಮಿಳವವನ್ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.


