ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕಣಚೂರು: ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2015-16ನೇ ಸಾಲಿನ ವಾರ್ಷಿಕೋತ್ಸವವು ಸಮಾರಂಭವು ಕಾಲೇಜು ಸಭಾಂಗಣದಲ್ಲಿ ವಿಜೃಂಭಣೆಯೊಂದಿಗೆ ನೆರವೇರಿತು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹೇಮಲತಾರವರಿಂದ ವಾರ್ಷಿಕ ವರದಿ ಮಂಡಿಸಿದರು. ನಂತರ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ನೆರವೇರಿತು. ಕಾಲೇಜಿನ ವಿದ್ಯಾರ್ಥಿನಿಯರ ವಿಜ್ಞಾನ ವಸ್ತುಪ್ರದರ್ಶನ ಮತ್ತು ಆಹಾರಮೇಳ ಕಾರ್ಯಕ್ರಮವು ವಿಶೇಷ ಆಕರ್ಷಣೆಯಾಗಿತ್ತು. ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರಗಿದವು.
ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಮೊನಿಸ್, ಅಬ್ದುಲ್ ರಹಿಮಾನ್, ಕಣಚೂರು ವಿದ್ಯಾಸಂಸ್ಥೆಗಳ ಮುಖ್ಯಸ್ಥ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಫೌಝಿಯ ಸ್ವಾಗತ ಭಾಷಣ, ವಿದ್ಯಾರ್ಥಿನಿ ಅಜ್ ನೀನ್ ನಿರೂಪಣೆ ಹಾಗೂ ಅಶ್ ಫಿಯಾ ವಂದನಾರ್ಪಣೆಗೈದರು.