ಉಳ್ಳಾಲ್ ನ್ಯೂಶ್ ನೆಟ್ ವರ್ಕ್
ಮಾರಿಪಳ್ಳ: ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಬರ್ಬರವಾಗಿ ಹತ್ಯೆಗೈಯಲು ಪ್ರಯತ್ನಿಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳ ಎಂಬಲ್ಲಿ ನಡೆದಿದೆ.
ಮಾರಿಪಳ್ಳ ನಿವಾಸಿ ಮಾದ ಹನೀಫ್(೩೦) ಎಂಬಾತನನ್ನು ಕಾರು ಮತ್ತು ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡ ಇತನನ್ನು ನಗರದ ಆಸ್ಪತ್ರೆಗೆ ಸೇರಿಸಲಾಗಿದ್ದು ಇತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹನೀಪ್ ಯಾನೆ ಮಾದ ಹನೀಪ್ ರೌಡಿ ಶೀಟರ್ ಆಗಿದ್ದು, 2014ರಲ್ಲಿ ನಡೆದ ಆಟೋ ಚಾಲಕ ರಿಫಾಯಿ ಹತ್ಯೆಯಲ್ಲಿ ಭಾಗಿಯಾಗಿದ್ದು ಈ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಇತ ಹತ್ತು ದಿನಗಳ್ ಹಿಂದೆಯಷ್ಟೆ ಜೈಲಿನಿಂದ ಬಂದಿದ್ದನೆಂದು ತಿಳಿದು ಬಂದಿದ್ದು, ರಿಫಾಯಿ ಹತ್ಯೆಗೆ ಪ್ರತಿಕಾರ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






