Site icon Ullalavani

ಮದುವೆ ದಿಬ್ಬಣದ ಬಸ್ ಪಲ್ಟಿ: ೧೫ ಮಂದಿ ದುರ್ಮರಣ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮಧ್ಯಪ್ರದೇಶ : ಮದುವೆಗೆ ತೆರಳುತ್ತಿದ್ದ ದಿಬ್ಬಣದ ಬಸ್‌ ಉರುಳಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ದಾರುಣವಾಗಿ ಸಾವನ್ನಪ್ಪಿ ,20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಬಮ್ಮೊರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತಕ್ಕೀಡಾದ ಬಸ್‌ ಇಂಧೋರ್‌ನಿಂದ ಚಿಂದ್‌ವಾಡ ಎಂಬಲ್ಲಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದ್ದು ಬಸ್‌ನಲ್ಲಿ ಒಟ್ಟು 55 ಮಂದಿ ಇದ್ದರು ಎಂದು ಹೇಳಲಾಗಿದ್ದು, ದುರಂತದಲ್ಲಿ ೧೫ ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಗಾಯಾಳು ಗಳನ್ನು ಜಿಲ್ಲಾ ಆಸ್ಪತ್ರಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Exit mobile version