Site icon Ullalavani

ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಆರ್ಥಿಕ ಸಬಲೀಕರಣದ ಮೂಲಕ ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಲು ಶಿಕ್ಷಣದಿಂದ ಮಾತ್ರ ಸಾಧ್ಯವಿದ್ದು, ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

ಅವರು ಉಳ್ಳಾಲ ಮಾಸ್ತಿಕಟ್ಟೆ ಅಜಾದ್ ನಗರದ ಹಝ್ರತ್ ಸೈಯ್ಯದ್ ಮದನಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಉಳ್ಳಾಲ ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‍ನ ಉಪಾಧ್ಯಕ್ಷ ಬಿ.ಜೆ. ಹನೀಫ್, ಕೋಶಾಧಿಕಾರಿ ನಾಝಿಂ, ಆಡಳಿತಾಧಿಕಾರಿ ಅಬ್ದುಲ್ ಲತೀಫ್, ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಾಫ, ಉಳ್ಳಾಲ ನಗರ ಪಂಚಾಯಿತಿ ಸದಸ್ಯ ಅಶ್ರಫ್ ಬಾವಾ, ಇಬ್ರಾಹಿಂ ಶೌಕತ್, ಎಮ್.ಎಚ್. ಮಲಾರ್, ಕೆ.ಎಂ.ಕೆ. ಮಂಜನಾಡಿ, ದರ್ಗಾ ಮ್ಯಾನೇಜರ್ ಯೂಸುಫ್ ಅಲ್ ಮಸ್ಜಿದುಲ್ ಫಾರೂಕ್‍ನ ಉಪಾಧ್ಯಕ್ಷ ಅಹಮ್ಮದ್ ರಫೀಕ್ ಯು.ಸಿ., ಕೋಶಾಧಿಕಾರಿ ಮಹಮ್ಮದ್, ಅಬ್ದುಲ್ ಖಾದರ್ ಮುಸ್ಲಿಯಾರ್ ಹಾಗೂ ತೌಸಿಫ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿಗೆ ಪುರಸ್ಕøತರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಸಂಗೀತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಹನ್ನತ್ ಬೀಬಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ತನ್‍ಝಿಲ್ ಫಾತಿಮಾ ವಂದಿಸಿದರು.

 

Exit mobile version