ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಬೀರಿ : ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ಕೋಟೆಕಾರು ಸಮೀಪದ ಬೀರಿ ಚೆಕ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಪೊಲೀಸರ ಜತೆ ಕುಡುಕನ ಅನುಚಿತ ವರ್ತನೆ: ಬಂಧನ
ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಕಂಠಪೂರ್ತಿ ಕುಡಿದಿದ್ದ ಮಧ್ಯವಯಸ್ಕನೋರ್ವ ಸ್ಥಳಕ್ಕೆ ಬಂದಿದ್ದ ಪೊಲೀಸರ ಜತೆಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದನು. ಮೊದಲಿಗೆ ಪೊಲೀಸರು ಎಚ್ಚರಿಕೆಯನ್ನು ನೀಡಿದರೂ, ಆತ ಇನ್ನಷ್ಟ್ಟು ದುವರ್ತನೆಯನ್ನು ಮುಂದುವರಿಸಲು ತೊಡಗಿದಾಗ ರೊಚ್ಚಿಗೆದ್ದ ಪೊಲೀಸರು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.