Site icon Ullalavani

ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಪೇದೆ ಬಲಿ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ನವದೆಹಲಿ: ದೆಹಲಿಯ ನ್ಯಾಯಾಲಯವೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್‌ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಭದ್ರತಾ ಲೋಪಕ್ಕೆ ಸಾಕ್ಷಿ ಎಂಬಂತೆ ಕರ್ಕಾರ್‌ದೂಮಾ ಕೋರ್ಟ್‌ನ ಹಾಲ್ ನಂ. 73ರಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಧೀಶರೆದುರೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಪೇದೆಯೊಬ್ಬರಿಗೆ ನಾಲ್ಕು ಗುಂಡುಗಳು ತಗುಲಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಳಿದಂತೆ ಇಬ್ಬರು ಪೇದೆ ಹಾಗೂ ನ್ಯಾಯಾಲಯದ ಕ್ಲರ್ಕ್ ಗೆ ಗಾಯವಾಗಿದೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ದೆಹಲಿ ಪೊಲೀಸರು ಗುಂಡಿನ ದಾಳಿ ನಡೆಸಿದ ನಾಲ್ವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ.

Exit mobile version