Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ವಿರೋಧ ಪಕ್ಷಗಳ ಆರೋಪ ಸ್ವಾಭಾವಿಕ: ಸಚಿವ ಯು.ಟಿ.ಖಾದರ್

UllalaVaniBy UllalaVaniDecember 23, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರ ಕಾರ್ಯ ವೈಖರಿ ಬಗ್ಗೆ ನಿಗಾ ಇಡಲಾಗಿದೆ. ಚುನಾವಣೆ ದಿನ ಎಲ್ಲರೂ ಒಗ್ಗಟ್ಟಿನಿಂದ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಮತ ಹಾಕುವ ಮೂಲಕ ಕುರ್ನಾಡು ಮತ್ತು ಉಳ್ಳಾಲ ಬ್ಲಾಕ್‍ನಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ನೋಡಿಕೊಳ್ಳಬೇಕು. ಚುನಾವಣೆ ಸಂದರ್ಭ ವಿರೋಧ ಪಕ್ಷದಿಂದ ಆರೋಪ ಸ್ವಾಭಾವಿಕವಾಗಿದ್ದು ಬಿಜೆಪಿ ಮಾಡುತ್ತಿರುವ ಆರೋಪಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಕುರ್ನಾಡು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಂಗಳವಾರ ಮುಡಿಪು ಖಾಸಗಿ ಸಭಾಂಗಣದಲ್ಲಿ ನಡೆದ ಸ್ಥಳಿಯಾಡಳಿತ ಜನಪ್ರತಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

DSC_8237 DSC_8240 DSC_8242 DSC_8244 DSC_8246 DSC_8249 DSC_8250 DSC_8252 DSC_8255ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಜನಪ್ರತಿನಿಧಿಗಳು ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೆ ಅಡ್ಡ ಮತದಾನ ಮಾಡಿದರೆ ಅವರ ವಿರುದ್ಧ ಯಾವುದೇ ಕರುಣೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್‍ನಿಂದ 107 ಭರವಸೆಗಳನ್ನು ನೀಡಲಾಗಿದ್ದು ಈಗಾಗಲೇ 102 ಭರವಸೆಗಳನ್ನು ಈಡೇರಿಸಲಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಮುಖಂದರು, ಕಾರ್ಯಕರ್ತರು, ಜನಪ್ರತಿನಿಧಿಗಳ ಅಭಿಲಾಷೆ ಮೇರೆಗೆ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಮತ್ತೆ ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು.

ಇದುವರೆಗಿನ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಹಕ್ಕು, ಸಮಸ್ಯೆಗಳ ಬಗ್ಗೆ ವಿಧಾಪರಿಷತ್‍ನಲ್ಲಿ ಧ್ವನಿ ಎತ್ತುವ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿ ಗೆದ್ದಲ್ಲಿ ಮತದಾರರು ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದಾಗಿ ಅಭ್ಯರ್ಥಿ ಪ್ರತಾಪ್‍ಚಂದ್ರ ಶೆಟ್ಟಿ ಹೇಳಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮಾಜಿ ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಎಪಿಎಂಸಿ ಸದಸ್ಯ ಉಮರ್ ಪಜೀರ್, ಎಸ್‍ಸಿ-ಎಸ್‍ಟಿ ಘಟಕದ ಅಧ್ಯಕ್ಷ ಪದ್ಮನಾಭ ನರಿಂಗಾನ, ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಕೊಣಾಜೆ,ನಾಸೀರ್ ನಡುಪದವು, ಕ್ಷೇತ್ರ ಯುವಕಾಂಗ್ರೆಸ್ ಕಾರ್ಯದರ್ಶಿ ಸಮೀರ್ ಪಜೀರ್ ಮೊದಲಾದವರು ಉಪಸ್ಥಿತರಿದ್ದರು.

ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಲೀಲ್ ಮೊಂಟೆಪದವು ಕಾರ್ಯಕ್ರಮ ನಿರೂಪಿಸಿದರು.

`ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಅಧಿಸೂಚನೆ ಜ.8 ಹೊರಡಿಸಲಿದ್ದು ಮೆಲ್ದರ್ಜೆಗೇರಿರುವ ಪಟ್ಟಣ ಪಂಚಾಯಿತಿಗಳಿಗೂ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲಾಗುವುದು. ಸೋಮೇಶ್ವರ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸುವ ಸಂಬಂಧ ಜಿಲ್ಲಾಡಳಿತದಿಂದ ಯಾವುದೇ ಮನವಿ ಬಂದಿರಲಿಲ್ಲ’
ವಿನಯಕುಮಾರ್ ಸೊರಕೆ, ನಗರಾಭಿವೃದ್ಧಿ ಸಚಿವ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

By UllalaVaniSeptember 1, 20260

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘ, ಬಾಳೆಪುಣಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಿ.ಎ. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಯಾಗಿ…

ಕುಂದಾಪುರ : ಸಮುದ್ರದಲ್ಲಿ ಮುಳುಗಿದ್ದ 30 ಲಕ್ಷದ ಮೀನುಗಾರಿಕಾ ಬಲೆ- ಹೊರತೆಗದ ಮೀನುಗಾರ ತಂಡ

September 1, 2026

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

September 1, 2026

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026
1 2 3 … 2,083 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version