ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕುತ್ತಾರು: ಬಿಜೆಪಿ ಕ್ಷೇತ್ರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 91ನೇ ಜನ್ಮ ದಿನದ ಪ್ರಯುಕ್ತ ಕುತ್ತಾರು ಬಾಲಸಂರಕ್ಷಣಾ ಕೆಂದ್ರದ ಮಕ್ಕಳಿಗೆ ಹಣ್ಣು ವಿತರಿಸಲಾಯಿತು.
ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಸಮಿತಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಯುವಮೋರ್ಚಾ ಅಧ್ಯಕ್ಷ ಜೀವನ್ ತೊಕ್ಕೊಟ್ಟು, ಜಿಲ್ಲಾ ಉಪಾಧ್ಯಕ್ಷ ಗೋಪಿನಾಥ ಬಗಂಬಿಲ, ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಯಶವಂತ ಅಮೀನ್, ಸಂಜೀವ ಶೆಟ್ಟಿ, ಪ್ರಕಾಶ್ ಗಾಂಧಿನಗರ, ಗಣೇಶ್ ಕಾಪಿಕಾಡ್, ಉಮೇಶ್ ಕುಂಪಲ, ಹರಿಯಪ್ಪ ಸಾಲ್ಯಾನ್, ಸುರೇಶ್ ಶೆಟ್ಟಿ, ಸುರೇಂದ್ರ ಪಾವೂರು, ಸಚಿನ್ ಮೋರೆ, ಗುರು ನರಿಂಗಾನ, ಸಂಸ್ಥೆಯ ಮುಖ್ಯಸ್ಥೆ ಸುಧಾ ಮೊದಲಾದವರು ಉಪಸ್ಥಿತರಿದ್ದರು.
ಶಿವಪ್ರಸಾದ್ ಕಕ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.


