ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕಾಪಿಕಾಡು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಸಂಗಮದಂತಹ ಕಾರ್ಯಕ್ರಮಗಳು ಪೂರಕ ಎಂದು ಕಾಪಿಕಾಡು ಉಮಾಪುರಿಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ಮೊಕ್ತೇಸರ ಈಶ್ವರ ಉಳ್ಳಾಲ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಳ್ಳಾಲ ಜಾಗೃತ ವಿವಿದ್ದೋದ್ಧೇಶ ಸಹಕಾರಿ ಸಂಘ ಅಧ್ಯಕ್ಷ ರಘುಚಂದ್ರ ಬಳ್ಳಾಲ್, ರೋಟರಿ ಕ್ಲಬ್ ದೇರಳಕಟ್ಟೆ ಅಧ್ಯಕ್ಷ ಡಿ. ಎನ್. ರಾಘವ, ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷ ಶಶಿಕಾಂತ್ ಪರ್ಯತ್ತೂರು, ಭಗತ್‍ಸಿಂಗ್ ಸೇವಾ ಪ್ರತಿಷ್ಟಾನ ತೊಕ್ಕೊಟ್ಟು ಇದರ ಅಧ್ಯಕ್ಷ ಪ್ರವೀಣ್ ಎಸ್. ಕುಂಪಲ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಬಗಂಬಿಲ ಶ್ರೀ ಆಲಿ ಚಾಮುಂಡಿ ದೈವಸ್ಥಾನ ಅಧ್ಯಕ್ಷ ಮಾಧವ ಬಗಂಬಿಲ, ಪೆÇಸಕುರಲ್ ಮಹಿಳಾ ವಿಭಾಗ ಅಧ್ಯಕ್ಷೆ ಸುಹಾಸಿನಿ ಬಬ್ಬುಕಟ್ಟೆ, ರತ್ನಾ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ ಮತ್ತಿತರರು ಉಪಸ್ಥಿತರಿದ್ದರು.
ಪೆÇಸಕುರಲ್‍ನ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ದೈಹಿಕ ಶಿಕ್ಷಕ ಮೋಹನ್ ಶಿರ್ಲಾಲ್ ಕಾಯರಕ್ರಮ ನಿರ್ವಹಿಸಿದರು. ಜಯಂತ್ ಸಂಕೊಳಿಗೆ ವಂದಿಸಿದರು.