Site icon Ullalavani

ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಆಯ್ಕೆ

ಉಳ್ಳಾಲ್  ನ್ಯೂಸ್ ನೆಟ್ ವರ್ಕ್

ತಲಪಾಡಿ: ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಆಯ್ಕೆಯಾಗಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನಯ ನಾೈಕ್ ಅವರ ಮನೆಯ ವಠಾರದಲ್ಲಿ ಬಿಜೆಪಿ ತಲಪಾಡಿ ಗ್ರಾಮ ಸಮಿತಿ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಪ್ರ. ಕಾರ್ಯದರ್ಶಿಯಾಗಿ ರಾಜೀವ ದೇವಾಡಿಗ ದೇವಿಪುರ, ಉಪಾಧ್ಯಕ್ಷರಾಗಿ ಸಂತೋಷ್ ಕಡೇಮುಗೇರು, ಸೌಮ್ಯ ಗುಡ್ಡೆಮನೆ, ಕಾರ್ಯದರ್ಶಿಗಳಾಗಿ ರಾಜೇಶ್ ಗುಡ್ಡೆಮನೆ, ಫಯಾಝ್ ದೇವಿನಗರ, ಹಾಗೂ 10 ಮಂದಿಯ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಪಕ್ಷ ಸಂಘಟನೆಯ ಕುರಿತು ಮಾಹಿತಿ ನೀಡಿದರು.

ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು, ಕ್ಷೇತ್ರ ಪ್ರ. ಕಾರ್ಯದರ್ಶಿ ಸಂಜೀವ ಶೆಟ್ಟಿ ಅಂಬ್ಲಮೊಗರು ಉಪಸ್ಥಿತರಿದ್ದರು.

ಕ್ಷೇತ್ರ ಪ್ರ. ಕಾರ್ಯದರ್ಶಿ ಯಶವಂತ್ ಅಮೀನ್ ಹೊಸ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಿಕೊಟ್ಟರು. ಚುನಾವಣಾ ಪ್ರಮುಖರಾಗಿ ಸುರೇಂದ್ರ ಶೆಟ್ಟಿ ಹಾಗೂ ಬಾಲಕೃಷ್ಣ ಭಾಗವಹಿಸಿದ್ದರು.

ರಾಜೀವ ದೇವಾಡಿಗ ಸ್ವಾಗತಿಸಿದರು. ರಾಜೇಶ್ ಗುಡ್ಡೆಮನೆ ವಂದಿಸಿದರು.

Exit mobile version