ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ : ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರ ಮಹೋತ್ಸವ ಪ್ರಯುಕ್ತ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಾ ಬಂದಿರುವ ಗುರುಸ್ವಾಮಿ ವಿಶ್ವನಾಥ ಕಾಯರ್ ಪಳಿಕೆ , ಗೋಪಾಲ ಶೆಟ್ಟಿ, ಶಿವಾನಂದ ರೆಡ್ಡಿ, ಪುಷ್ಪಲತಾ ರೈ ಇವರನ್ನು ಅಭಿನಂಧಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಟಿ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ಮ ಪಂಚಾಯತ್ ಅಧ್ಯಕ್ಷೆ ವಿಜಯ ಕೃಷ್ಣಪ್ಪ, ಗಿರೀಶ್ ಆಳ್ವ, ಹೇಮಂತ್ ಶೆಟ್ಟಿ, ಮೋಹನಾಂಗಯ್ಯ ಸ್ವಾಮಿ, ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ್ ಅಡ್ಯಂತಾಯ ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಜೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ರೈ ಸನ್ಮಾನಿತರ ವಿವರ ಓದಿದರು.
ಜಾತ್ರೆ ಪ್ರಯುಕ್ತ ಸಾಂಸ್ಕøತಿಕ ಕಾರ್ಯಕ್ರಮ, ಸುಗಮ ಸಂಗೀತ ಕಾರ್ಯಕ್ರಮ ಮತ್ತು ಶ್ರೀ ಕಟೀಲು ಮೇಳದವರಿಂದ ಯಕ್ಷಗಾನ ನಡೆಯಿತು.



