ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತಿರುನಲ್ವೇಲಿ :ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 10 ಮಂದಿ ದಾರುಣವಾಗಿ ಸಾವನ್ನಪ್ಪಿ ,ಇತರ 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅಪಘಾತ ಶುಕ್ರವಾರ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಸಂಭವಿಸಿದೆ.
ತಿರುವನಂತಪುರಂನಿಂದ ವೆಲಂಕಣಿ ಕಡೆಗೆ ಪ್ರವಾಸಿಕ್ಕೆಂದು ತೆರಳುತ್ತಿದ್ದು ತಮಿಳುನಾಡಿನ ಪಾಂಡಿಚೆರಿಯಿಂದ ಕೇರಳಗೆ ಹೋಗುತ್ತಿತ್ತು. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿದ್ದ ಬಂಡೆಯೊಂದಕ್ಕೆ ಬಸ್ ಢಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅವಘಡ ಸಂಭವಿಸಿದೆ.
ಮೃತರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರಗೆ ದಾಖಲಿಸಲಾಗಿದೆ.


