ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಹಾಸನ :ನ್ಯಾನೋ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಡಣ ತಾಲೂಕು ಚಿಕ್ಕಗೊಂಡನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಅದೃಷ್ಟವಷಾತ್ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪಾರಾಗಿದ್ದಾರೆ.
ಮೃತರು ಉಡುಪಿ ಮೂಲದ ಮುಂಬೈ ನಿವಾಸಿಗಳಾದ ಅಶೋಕ್ ಪ್ರಭು(45) ಮತ್ತು ಅಶ್ವಿನಿ ಪ್ರಭು(35) ಎಂದು ತಿಳಿದು ಬಂದಿದ್ದು, ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಅಶೋಕ್ ಅವರು ಬೆಂಗಳೂರಿನ ಕಾನ್ಯೆಂಟ್ರಿಕ್ಸ್ ಕಂಪೆನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು,ಉಡುಪಿಯ ಪೆರ್ಣಂಕಿಲದ ನಿವಾಸದಿಂದ ಬೆಂಗಳೂರಿಗೆ ವಾಪಾಸಾಗುತ್ತಿದ್ದರು.
ಹಿರಿಸಾವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


