Site icon Ullalavani

ಇಂಡೋನೇಷ್ಯಾದಲ್ಲಿ ಸರಣಿ ಬಾಂಬ್ ಸ್ಪೋಟ: 6 ಮಂದಿ ಸಾವು

ಜಕಾರ್ತಾ:ಇಲ್ಲಿನ ವಿಶ್ವಸಂಸ್ಥೆಯ ಕಚೇರಿ ಮತ್ತು ಮಾಲ್ ವೊಂದರ ಹತ್ತಿರ ಉಗ್ರರು ನಡೆಸಿದ ಬಾಂಬ್ ಸ್ಪೋಟದಲ್ಲಿ ಕನಿಷ್ಟ 6 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ನಗರದ ಜನ ನಿಬಿಡ ಪ್ರದೇಶಗಳಲ್ಲಿ ಶಸ್ತ್ರಧಾರಿ ಉಗ್ರರು 6 ಕಡೆಗಳಲ್ಲಿ ಬಾಂಬ್‌ ಸ್ಫೋಟಿಸಿದ್ದಾರೆ. ಕಫೆಯೊಂದರ ಬಳಿ ಬಾಂಬ್‌ ಸಿಡಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್‌ ಅಧಿಕಾರಿ ಬಲಿಯಾಗಿದ್ದಾರೆ.ಮತ್ತು ದಾಳಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿಯಲ್ಲಿ ಭಾಗಿಯಾದ 14 ಕ್ಕೂ ಹೆಚ್ಚು ಮಂದಿ ಉಗ್ರರು ಕಫೆಯೊಂದರಲ್ಲಿ ಅಡಗಿರುವುದಾಗಿ ಹೇಳಲಾಗಿದ್ದು ,ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ದಮನಕ್ಕಾಗಿ ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಭದ್ರತಾ ಪಡೆಗಳು ಮತ್ತು ದಾಳಿಕೋರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ದಾಳಿಯನ್ನು ಯಾವ ಉಗ್ರ ಸಂಘಟನೆ ನಡೆಸಿದೆ ಎನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Exit mobile version