ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಯೇನೆಪೋಯ:ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ಮೂಲಕ ಸಾಮಾನ್ಯ ಜ್ಞಾನ ವೃದ್ಧಿಯೊಂದಿಗೆ ಸಮಾಜದ ಪೈಪೋಟಿಯಲ್ಲಿ ಭಾಗವಹಿಸಲು ಸಾಧ್ಯ ಎಂದು ಮಂಗಳೂರು ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು.
ಯೇನೆಪೋಯ ಮೊಯಿದ್ದೀನ್ ಕುಂಞÂ ಮೆಮೋರಿಯಲ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಘಟಕ ಸಂಸ್ಥೆ ಯೇನೆಪೋಯ ಫೌಂಡೇಶನ್ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಯೇನೆಪೊಯ ವಿವಿಯ ಯೆಂಡ್ಯೂರೆನ್ಸ್ ಝೋನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಸ್‍ಎಸ್‍ಎಲ್‍ಸಿ, ಪಿಯುಸಿ, ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಅತ್ಯುನ್ನತ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಶೇ.100 ಫಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಮಾತನಾಡಿದರು.

ಗೌರವ ಕೊಟ್ಟು ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಒಳ್ಳೆಯ ದಾರಿ ಮಾಡಿ ಕೊಡುತ್ತಿರುವ ಯೆನೆಪೋಯ ವಿಶ್ವವಿದ್ಯಾನಿಲಯದ ಕಾರ್ಯವೈಖರಿ ಶ್ಲಾಘನೀಯ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಪೈಪೋಟಿ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೊರಗಿನ ಸಮಾಜವನ್ನು ಎದುರಿಸಲು ಉತ್ಕøಷ್ಟ ಪೈಪೋಟಿಗಳಲ್ಲಿ ಭಾಗವಹಿಸಬೇಕು. ಶಿಕ್ಷಣ ಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸಮಾಜವನ್ನು ಎದುರಿಸುವ ಶಕ್ತಿಯನ್ನು ತಯಾರಿಸಬೇಕಿದೆ ಎಂದರು.
ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ನಾವಾಡುವ ಮಾತು ಮಿತ ಹಾಗೂ ಯಾರಿಗೂ ನೋವಾಗದಂತಿರಬೇಕು, ಒಂದು ಮಾತಿನಿಂದ ಕೆಟ್ಟದ್ದು ಮತ್ತು ಒಳ್ಳೆಯದು ಎರಡೂ ಆಗುತ್ತದೆ, ಇಂದು ಕರಾವಳಿ ಭಾಗದಲ್ಲಿ ಮಾತಿನಿಂದಲೇ ಅಶಾಂತಿ ಉಂಟಾಗುತ್ತದೆ. ಈ ಬಗ್ಗೆ ವಿದ್ಯಾಥಿಗಳಿಂದಲೇ ಜಾಗೃತಿ ಮೂಡಬೇಕಿದೆ ಎಂದರು.
ಯೆನೆಪೋಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವೈ.ಮಹಮ್ಮದ್ ಕುಂಞÂ ಅಧ್ಯಕ್ಷತೆ ವಹಿಸಿ, ಟ್ರಸ್ಟ್ ವತಿಯಿಂದ ಈ ವರ್ಷ ದ.ಕ, ಉಡುಪಿ ಹಾಗೂ ಕಾಸರಗೋಡಿನ 300 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೂರು ಸಾವಿರದಿಂದ 10 ಸಾವಿರದವರೆಗೆ ಪುರಸ್ಕಾರ ನೀಡಲಾಗುತ್ತಿದ್ದು ಇದಕ್ಕೆ 11 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಅಲ್ಲದೆ ಪ್ರತೀ ವರ್ಷ ಮೀಸಲಾತಿ ಮತ್ತು ಕ್ರೀಡಾ ಆಧಾರದಲ್ಲಿ ಐದು ವೈದ್ಯಕೀಯ, ಐದು ಫಿಸಿಯೋಥೆರಪಿ, ಐದು ದಂತ ವೈದ್ಯಕೀಯ ಹಾಗೂ ಐದು ನರ್ಸಿಂಗ್ ಸೀಟುಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು ಇದಕ್ಕಾಗಿ 4.18 ಕೋಟಿ ರೂಪಾಯಿ ವ್ಯಯಿಸುತ್ತಿದೆ ಎಂದರು.
ಯೇನೆಪೊಯ ವಿಶ್ವವಿದ್ಯಾಲಯದ ಕುಲಪತಿ ವೈ.ಅಬ್ದುಲ್ಲಾ ಕುಂಞÂ, ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಕೆ.ಖಾಲಿದ್ ಬಾವ, ಡಾ.ಸಿ.ಪಿ.ಹಬೀಬ್ ರಹ್ಮಾನ್, ಅಕಾಡೆಮಿ ನಿರ್ದೇಶಕ ಪ್ರೊ.ಪಿ.ಸಿ.ಎಂ.ಕುಂಞÂ, ಕಾರ್ಯದರ್ಶಿ ಡಾ.ಅಖ್ತರ್ ಹುಸೈನ್ ಮೊದಲಾದವರು ಉಪಸ್ಥಿತರಿದ್ದರು.
ಯೇನೆಪೊಯ ವಿವಿ ಉಪಕುಲತಿ ಡಾ.ಎಂ.ವಿಜಯಕುಮಾರ್ ಸ್ವಾಗತಿಸಿದರು. ಡಾ.ಮಲ್ಲಿಕಾ ಶೆಟ್ಟಿ ಮತ್ತು ಡಾ.ರೋಶೆಲ್ ಟೆಲ್ಲೀಸ್ ಕಾರ್ಯಕ್ರಮ ನಿರೂಪಿಸಿದರು.





