Site icon Ullalavani

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ

ಪೇಶಾವರ:ಪಾಕಿಸ್ತಾನದ ವಿಶ್ವ ವಿದ್ಯಾಲಯವೊಂದರ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ಮೂವರು ಉಗ್ರರು ನಡೆಸಿದ ದಾಳಿಯಲ್ಲಿ ಕೆಮೆಸ್ಟ್ರಿ ಪ್ರೊಫೆಸರ್ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವುದಾಗಿ ಪಾಕ್ ನ ಮಾಧ್ಯಮದ ವರದಿಗಳು ತಿಳಿಸಿವೆ.

ಮೂವರು ಬಂದೂಕುಧಾರಿ ಉಗ್ರರು ಪೇಶಾವರದಲ್ಲಿನ ಬಚಾ ಖಾನ್ ವಿಶ್ವವಿದ್ಯಾಲಯದ ಮೇಲೆ ದಾಳಿ ಮಾಡಿದ್ದು, ವಿಶ್ವವಿದ್ಯಾಲಯದೊಳಗೆ ಭಾರೀ ಪ್ರಮಾಣದಲ್ಲಿ ಸ್ಫೋಟದ ಶಬ್ಧಗಳು ಕೇಳಿಬರುತ್ತಿದೆ ಮೂಲಗಳಿಂದ ತಿಳಿದುಬಂದಿದೆ.

ಪಾಕ್ ಸೇನಾಪಡೆ ಯೂನಿರ್ವಸಿಟಿ ಸುತ್ತಮುತ್ತ ಸುತ್ತವರಿದಿದ್ದಾರೆ. ಪಾಕ್ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರಿದಿದೆ. ಬಚಾಖಾನ್ ಯೂನಿರ್ವಸಿಟಿಯೊಳಗೆ 3 ಸಾವಿರ ಮಂದಿ ಇದ್ದಿರುವುದಾಗಿ ವರದಿ ತಿಳಿಸಿದ್ದು, ಈಗಾಗಲೇ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. 50 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಈಗಾಗಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಉಗ್ರರರನ್ನು ಸದೆಬಡಿಯಲು ಈಗಾಗಲೇ ಸ್ಥಳಕ್ಕಾಗಮಿಸಿರುವ ವಿಶೇಷ ಭದ್ರತಾ ಪಡೆಗಳು ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ.
ಪಾಕ್ ಸೇನಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು  ಉಗ್ರರು ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Exit mobile version