ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ರೈಲಿನಿಂದ ಬಿದ್ದು ಅಪರಿಚಿತನೋರ್ವ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸುಮಾರು 30-35ರ ಹರೆಯದ ವ್ಯಕ್ತಿಯ ಮೃತದೇಹ ಛಿದ್ರಗೊಂಡ ಸ್ಥಿತಿಯಲ್ಲಿ ಬೆಳಿಗ್ಗೆ ಪತ್ತೆಯಾಗಿದೆ. ಬಲಗೈಯಲ್ಲಿ `ಓಂ’ ಮಚ್ಛೆಯನ್ನು ಧರಿಸಿದ್ದು, ವಾರೀಸುದಾರರಿದ್ದಲ್ಲಿ ರೈಲ್ವೇ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ. ಚಲಿಸುತ್ತಿರು ರೈಲಿನಿಂದ ಬಿದ್ದು ಮೃತಪಟ್ಟಿರುವುದಾಗಿ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


