Site icon Ullalavani

ಆತ್ಮಾಹುತಿ ಬಾಂಬ್ ಸ್ಫೋಟ: 13 ಸಾವು

ಕನೋ: ನೈಜೀರಿಯಾದ ಈಶಾನ್ಯ ಭಾಗದಲ್ಲಿ ಬುಧವಾರ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 13 ಮಂದಿ ದುರ್ಮರಣ ಹೊಂದಿರುವ ಘಟನೆ ನಡೆಸಿದೆ.

ನೈಜೀರಿಯಾದ ಈಶಾನ್ಯ ರಾಜ್ಯ ಚಿಬೋಕ್ ನಲ್ಲಿರುವ ಮಾರುಕಟ್ಟೆಗೆ ಪ್ರವೇಶಿದ್ದ ಐವರು ಉಗ್ರರು ಪೈಕಿ ಮೂವರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಇಬ್ಬರನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ನಡೆಸಿ 28ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Exit mobile version