ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಕೇಬಲ್ ಆಪರೇಟರ್‍ಗೆ ವಿದ್ಯುತ್ ತಗಲಿ ತಂತಿಯಿಂದ ಕೆಳಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ತೊಕ್ಕೊಟ್ಟು ಕೃಷ್ಣನಗರ ನಿವಾಸಿ ನಿಶಾಂತ್ (23) ಗಾಯಾಳು. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ವಿದ್ಯುತ್ ತಂತಿಗೆ ಹತ್ತಿ ಕೇಬಲ್ ಕಟ್ಟುತ್ತಿದ್ದ ಸಂದರ್ಭ ಹೈಟೆನ್ಶನ್ ನಲ್ಲಿದ್ದ ವಿದ್ಯುತ್ ಪ್ರವಹಿಸಿ ನಿಶಾಂತ್ ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


