ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ದೇರಳಕಟ್ಟೆ ರೋಟರಿ ಕ್ಲಬ್ ಮತ್ತು ಕೆಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವತಿಯಿಂದ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು.
ರೋಟರಿಕ್ಲಬ್ ನಿರ್ದೇಶಕರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ದೇಶದಲ್ಲಿ ಪೋಲಿಯೋ ನಿರ್ಮೂಲನಾ ಹಂತದಲ್ಲಿದ್ದರೂ ನೆರೆ ರಾಷ್ಟ್ರದಿಂದ ನಮ್ಮಲ್ಲಿಗೆ ಹರಡದಂತೆ ಮುನ್ನಚ್ಚೆರಿಕೆ ಕ್ರಮವಾಗಿ ನಮ್ಮಲ್ಲಿ ಲಸಿಕೆ ಹಾಕಲಾಗುವುದು. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ದೊಡ್ಡ ಬಸವ, ರೋಟರಿ ಕ್ಲಬ್ ದೇರಳಕಟ್ಟೆ ಅಧ್ಯಕ್ಷ ಡಿ.ಎನ್. ರಾಘವ, ನಿಯೋಜಿತ ಅಧ್ಯಕ್ಷ ಎನ್. ಟಿ. ರಾಮಕೃಷ್ಣ, ಕಾರ್ಯದರ್ಶಿ ಚಂದ್ರಶೇಖರ್ ಮತ್ತು ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.


