ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಬಬ್ಬುಕಟ್ಟೆ : ಕಾರೊಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಪಿಪ್ಟ್ ಕಾರು ಎದುರಿನಿಂದ ಬರುತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ನಂತರ ಬದಿಯಲ್ಲಿ ಬರುತ್ತಿದ್ದ ಇನ್ನೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಸ್ಕೂಟರ್ ಸವಾರ ರಾಬಿನ್ ಅವರ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣವೇ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ಕಾರು ಚಾಲಕನ ಅತೀ ವೇಗದ ಚಾಲನೆಯೇ ಕಾರಣವಾಗಿದೆ. ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.